ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ, ಸಂಸದೆ ಮಿಮಿ ಚಕ್ರವರ್ತಿ (Mimi Chakraborty) ಅವರು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಿಮಿ ಚಕ್ರವರ್ತಿ ತಮ್ಮ ಕ್ಷೇತ್ರದಲ್ಲಿ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ನಟಿ ತನ್ನ ರಾಜೀನಾಮೆಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಸ್ತಾಂತರಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಮಿಮಿ ಚಕ್ರವರ್ತಿ ಜಾದವ್ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ ಅವರು ತಮ್ಮ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್ ಗೆ ಕಳುಹಿಸದ ಕಾರಣ ಇದು ಅವರ ಔಪಚಾರಿಕ ರಾಜೀನಾಮೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.