ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಅನ್ವಯ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಎಂ.ಕೆ ಸ್ಟಾಲಿನ್ ನಿಲುವಳಿ ಮಂಡಿಸಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಇಂದು ಅವರು ನಿಲುವಳಿ ಮಂಡಿಸಿದ್ದು, ಅಲ್ಲಿನ ಸ್ಥಿತಿಗತಿಗಳ ಕುರಿತಾಗಿ ವಿವರಿಸಿದ್ದಾರೆ.
ಸೆ.28 ರಿಂದ ಅ.15 ರ ವರೆಗೆ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ಹೊರಡಿಸಿತ್ತು. ಕರ್ನಾಟಕವು ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎರಡರಲ್ಲೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು.