‘ಅಗ್ನಿವೀರ’ರಿಗೆ ರಕ್ಷಣಾ ಇಲಾಖೆಯಲ್ಲಿ ‘ಶೇ.10ರಷ್ಟು ಮೀಸಲಾತಿ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಅಗ್ನಿವೀರರಿಗೆ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ.
ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಶೇ. 10ರಷ್ಟು ಮೀಸಲಾತಿ ಜಾರಿಗೆ ತರಲಾಗುವುದು ಎಂದು ಸಚಿವಾಲಯ ಸರಣಿ ಟ್ವೀಟ್ ಮಾಡಿದೆ.
ಈ ಮೀಸಲಾತಿಯು ಮಾಜಿ ಸೈನಿಕರಿಗೆ ಅಸ್ತಿತ್ವದಲ್ಲಿರುವ ಮೀಸಲಾತಿಯ ಜೊತೆಗೆ ಇರುತ್ತದೆ. ‘ಈ ನಿಬಂಧನೆಗಳನ್ನು ಜಾರಿಗೆ ತರಲು ಸಂಬಂಧಿತ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಕೈಗೊಳ್ಳಲಾಗುವುದು. ರಕ್ಷಣಾ ಸಾರ್ವಜನಿಕ ವಲಯದ ಉದ್ದಿಮೆಗಳು ತಮ್ಮ ನೇಮಕಾತಿ ನಿಯಮಗಳಿಗೆ ಇದೇ ರೀತಿಯ ತಿದ್ದುಪಡಿ ಮಾಡಲು ಸಲಹೆ ನೀಡಲಾಗುವುದು. ಅಗತ್ಯ ವಯೋಮಿತಿ ಸಡಿಲಿಕೆ ಸಹ ಮಾಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!