Wednesday, August 10, 2022

Latest Posts

ಸ್ಥಳೀಯ ಶಾಸಕರ ಕೋರಿಕೆಯಂತೆ ಎಪಿಎಂಸಿಗಳಿಗೆ ಹೆಚ್ಚಿನ ಅನುದಾನ: ಸಚಿವ ಎಸ್.ಟಿ. ಸೋಮಶೇಖರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ಎಪಿಎಂಸಿಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಕೇಂದ್ರದ ಯೋಜನೆಗೆ ರಾಜ್ಯ ಸರಕಾರ ಸಹಕಾರ ನೀಡಲಿದೆ. ಸ್ಥಳೀಯ ಶಾಸಕರ ಕೋರಿಕೆಯಂತೆ ಎಪಿಎಂಸಿಗಳಿಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರದ ಬಿಜೆಪಿ ದ.ಕ. ಜಿಲ್ಲಾ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಜನಪ್ರತಿನಿಧಿಗಳು, ಕಾರ್ಯಕರ್ತರ ಜತೆ ಸಂವಾದ ನಡೆಸಿದರು.
ಕೋವಿಡ್‌ನಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರಕಾರ ರೈತರ ನೆರವಿಗೆ ನಿಲ್ಲಲಿದೆ. ರೈತರಿಗೆ ಹೊಸದಾಗಿ ಸಾಲ ನೀಡಿಕೆ ಹಾಗೂ ಕೋವಿಡ್‌ನಿಂದ ಮೃತಪಟ್ಟ ರೈತರ ಸಾಲ ಮನ್ನಾಕ್ಕೆ ರಾಜ್ಯ ಸರಕಾರ ಕ್ರಮ ಕೈಗೊಂಡಿದೆ. ರೈತರಿಗೆ ಸಾಲ ನೀಡಲು ಮುಖ್ಯಮಂತ್ರಿ ಅವರು ಹೊಸ ಗುರಿ ನಿಗದಿಪಡಿಸಿದ್ದು, ಡಿಸಿಸಿ ಬ್ಯಾಂಕ್‌ಗಳ ಮೂಲಕ ಅರ್ಹರಿಗೆ ಸಾಲ ವಿತರಣೆ ಮಾಡಲಾಗುವುದು. ಸಾಲ ನೀಡಿಕೆಯಲ್ಲಿ ಯಾವುದೇ ಸಮಸ್ಯೆ ಉಂಟಾದರೆ ಕಾರ್ಯಕರ್ತರು ನನ್ನ ಗಮನಕ್ಕೆ ತನ್ನಿ ಎಂದರು.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡಿ, ಎಪಿಎಂಸಿಯ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ಸಚಿವ ಸೋಮಶೇಖರ್ ಅವರು ಕ್ರಮ ಕೈಗೊಂಡಿದ್ದಾರೆ. ನಮ್ಮ ಎಲ್ಲ ಬೇಡಿಕೆಗಳಿಗೆ ಸಚಿವರು ಸ್ಪಂದಿಸುತ್ತಿದ್ದಾರೆ. ಆ ಮೂಲಕ ತನ್ನ ಖಾತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಜತೆಗೆ ಪಕ್ಷ ಸಂಘಟನೆಗೂ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಶಾಸಕ ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ ಕಟೀಲ್, ಪ್ರಭಾಮಾಲಿನಿ, ಮಂಗಳೂರು ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಕಾರ್ಪೋರೇಟರ್‌ಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss