ಬೆಂಗಳೂರಿಗೆ ಶಿಫ್ಟ್ ಆಗುತ್ತಾ ಕೇರಳದಲ್ಲಿ ಕೋಲಾಹಲ ಎಬ್ಬಿಸಿದ ಚಿನ್ನ ಕಳ್ಳಸಾಗಣೆ ಕೇಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣ ಬೆಂಗಳೂರಿಗೆ ವರ್ಗಾವಣೆಯಾಗಲಿದೆಯೇ?
ಹೀಗೊಂದು ಸಿದ್ಧತೆ ಆರಂಭವಾಗಿರುವ ಮಾಹಿತಿಗಳು ಹೊರಬೀಳುತ್ತಿವೆ. ಈ ಪ್ರಕರಣವನ್ನು ಕೇರಳದಿಂದ ಬೆಂಗಳೂರಿನ ಪ್ರಧಾನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಇ.ಡಿ ಕೊಚ್ಚಿ ವಲಯ ಸಹಾಯಕ ನಿರ್ದೇಶಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಯಾಕೆ ಈ ವರ್ಗಾವಣೆ?
ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯು ಎರ್ನಾಕುಳಂ ಪ್ರಿನ್ಸಿಪಲ್ ಸೆಷನ್ಸ್ ಕೋರ್ಟ್‌ನಲ್ಲಿ ಮತ್ತೆ ಆರಂಭವಾಗಲಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ಗೋಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸುವುದು ಉತ್ತಮ ಎಂಬ ನಿಲುವಿಗೆ ಇಡಿ ಬಂದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!