ಭಾರತ ತಂಡದ ಭಾಗವಾಗಬೇಕು, ಅದುವೇ ನನ್ನ ಬಹುದೊಡ್ಡ ಗುರಿ: ದಿನೇಶ್ ಕಾರ್ತಿಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಆಸರೆಯಾದ ದಿನೇಶ್ ಕಾರ್ತಿಕ್, ಇದೀಗ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿ ಟಿ20 ವಿಶ್ವಕಪ್​ ಆಡುವುದು ನನ್ನ ಬಹುದೊಡ್ಡ ಗುರಿ ಎಂದು ಹೇಳಿಕೊಂಡಿದ್ದಾರೆ.
ದಿನೇಶ್ ಕಾರ್ತಿಕ್ ಶನಿವಾರ ಡೆಲ್ಲಿ ವಿರುದ್ಧ ನಡೆ ಪಂದ್ಯದಲ್ಲಿ 34 ಎಸೆತಗಳಲ್ಲಿ 66 ರನ್​ಗಳಿಸುವ ಮೂಲಕ ಆರ್​ಸಿಬಿಗೆ 16 ರನ್​ಗಳ ರೋಚಕ ಗೆಲುವು ತಂದುಕೊಟ್ಟಿದ್ದರು. ಈ ಪಂದ್ಯ ಮಾತ್ರವಲ್ಲ, ಪ್ರಸ್ತುತ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಳಲ್ಲಿ ಕ್ರಮವಾಗಿ 32*(14),14*(7), 44*(23), 7*(2), 34(14) ರನ್​ಗಳಿಸಿದ್ದಾರೆ.
ಇನ್ನು ಕೇವಲ ಒಂದು ಪಂದ್ಯದಲ್ಲಿ ಮಾತ್ರ ವಿಕೆಟ್​ ಒಪ್ಪಿಸಿದ್ದು,ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ.
‘ನಾನು ದೊಡ್ಡ ಕನಸನ್ನು ಹೊಂದಿದ್ದೇನೆ. ಅದನ್ನು ಸಾಧಿಸುವ ಸಲುವಾಗಿ ಕಠಿಣ ಪರಿಶ್ರಮ ವಹಿಸುತ್ತಿದ್ದೇನೆ. ದೇಶಕ್ಕಾಗಿ ಏನಾದರೂ ವಿಶೇಷ ಸಾಧನೆ ಮಾಡಬೇಕು ಎಂಬುದು ನನ್ನ ಬಹುದೊಡ್ಡ ಗುರಿ. ಇದು ನನ್ನ ಪಯಣದ ಒಂದು ಭಾಗವಷ್ಟೆ. ಭಾರತ ತಂಡದ ಭಾಗವಾಗುವುದಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ನಂತರ ದ ದಿನೇಶ್ ಕಾರ್ತಿಕ್ ಹೇಳಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!