ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣಕ್ಕೆ ಯಾರೂ ಶಾಸಕರಿಲ್ಲ ಹೌದು, ಆದರೆ ಚನ್ನಪಟ್ಟಣಕ್ಕೆ ನಾನೇ ಮನೆಮಗ, ನಾನೇ ಸೇವಕ, ನಾನೇ ಮಂತ್ರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದು ಹೇಳಿದರು.