Sunday, February 5, 2023

Latest Posts

ತರಗತಿಗೆ ನುಗ್ಗಿ ಶಿಕ್ಷಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಮಾನಸಿಕ ಅಸ್ವಸ್ಥ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾನಸಿಕ ಅಸ್ವಸ್ಥನೋರ್ವ ಶಾಲಾ ಶಿಕ್ಷಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೂರಿಗೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ವೆಂಕಟಶಿವ ಗಾಯಗೊಂಡಿದ್ದಾರೆ.

ಕೂರಿಗೇರಿಪಲ್ಲಿ ಗ್ರಾಮದ ನಿವಾಸಿ ಮಂಜುನಾಥ್ ಎಂಬಾತ ಮಾನಸಿಕ ಅಸ್ವಸ್ಥನಾಗಿದ್ದು, ಗ್ರಾಮದಲ್ಲಿ ತಿರುಗಾಡಿಕೊಂಡಿದ್ದ ಎನ್ನಲಾಗಿದೆ. ಇಂದು ಶಿಕ್ಷಕ ವೆಂಕಟಶಿವ ಅವರು ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡುವಾಗ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಇದರಿಂದ ಶಿಕ್ಷಕನಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಜುನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!