ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
ಹೊಸ ದಿಗಂತ ವರದಿ, ಉಡುಪಿ:
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆದು ಜನರ ಜೀವವನ್ನು ರಕ್ಷಿಸಬೇಕಾದ್ದು ಪ್ರಥಮ ಆದ್ಯತೆಯಾಗಿದೆ. ವೈದ್ಯಕೀಯ ಆಮ್ಲಜನಕ ಸಿಲಿಂಡರ್ಗಳ ಆವಶ್ಯಕತೆ ತುಂಬಾ ಇದೆ. ಪ್ರಸ್ತುತ ಮೆಡಿಕಲ್ ಸರಬರಾಜಿಗೆ ಆಕ್ಸಿನೇಟೆಡ್ ಸಿಲಿಂಡರ್ಗಳ ಕೊರತೆಯಿದ್ದು, ಕೈಗಾರಿಕಾ ಸಿಲಿಂಡರ್ಗಳನ್ನು ವೈದ್ಯಕೀಯ ಸಿಲಿಂಡರ್ಗಳನ್ನಾಗಿ ಮಾರ್ಪಡಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಸಿಲಿಂಡರ್ಗಳನ್ನು ಪಡೆದುಕೊಂಡು ತಮ್ಮ ವಶದಲ್ಲಿಟ್ಟುಕೊಂಡಿರುವ ಸಂಬಂಧಿಸಿದ ಎಲ್ಲ ಕಾರ್ಖಾನೆಗಳ ಮಾಲೀಕರು ತಕ್ಷಣ ತಮ್ಮ ಬಳಿ ಇಟ್ಟುಕೊಂಡಿರುವ ಕೈಗಾರಿಕಾ ಸಿಲಿಂಡರ್ಗಳನ್ನು ಸರಬರಾಜುದಾರರಿಗೆ ಹಿಂದಿರುಗಿಸಬೇಕು. ವೈದ್ಯಕೀಯ ಆಮ್ಲಜನಕ ಸಿಲಿಂಡರ್ಗಳ ವ್ಯವಸ್ಥಿತ ಹಾಗೂ ಸುಗಮ ಪೂರೈಕೆಗೆ ಸಹಕಾರ ನೀಡಿ ಕೋವಿಡ್ ರೋಗಿಗಳ ಆರೈಕೆಗೆ ಸಹಾಯ ಹಸ್ತ ಚಾಚಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಜಿ.ಜಗದೀಶ ತಿಳಿಸಿದ್ದಾರೆ.