ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಮಂಗಳೂರು:
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ 100 ವೆಂಟಿಲೇಟರ್ ಗಳನ್ನು ದ.ಕ. ಜಿಲ್ಲೆಗೆ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಈಗ 70 ವೆಂಟಿಲೇಟರ್ಗಳಿವೆ. 30 ವೆಂಟಿಲೇಟರ್ ಗಳನ್ನು ಲೇಡಿಗೋಷನ್, ಮೆಡಿಕಲ್ ಕಾಲೇಜುಗಳು ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೆಚ್ಚುವರಿ 100 ವೆಂಟಿಲೇಟರ್ ಗಳಿಗೆ ಮುಖ್ಯಮಂತ್ರಿಗಳಿಗೆ ಬೇಡಿಕೆಯಿರಿಸಿದ್ದು ಮುಖ್ಯಮಂತ್ರಿಗಳು 100 ವೆಂಟಿಲೇಟರ್ ಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ರಾಜ್ಯ ಸರಕಾರ ನೀಡಲು ಉದ್ದೇಶಿಸಿರುವ 100 ವೆಂಟಿಲೇಟರ್ ಗಳ ಪೈಕಿ ಪ್ರಥಮ ಹಂತದಲ್ಲಿ 40 ವೆಂಟಿಲೇಟರ್`ಗಳು ಶೀಘ್ರದಲ್ಲೇ ಜಿಲ್ಲೆಗೆ ಬರಲಿದೆ. ಸದ್ಯ ವೆನ್ಲಾಕ್ ಆಸ್ಪತ್ರೆಯಲ್ಲಿ 40 ವೆಂಟಿಲೇಟರ್ ಗಳನ್ನು ಅಳವಡಿಸಲು ಬೇಕಾದ ಸ್ಥಳಾವಕಾಶ ಮಾಡಲಾಗಿದ್ದು ಇನ್ನುಳಿದ ವೆಂಟಿಲೇಟರ್`ಗಳನ್ನು ಸಮರ್ಪಕವಾಗಿ ಜೋಡಿಸಿ ಸಾರ್ವಜನಿಕ ಸೇವೆಗೆ ನೀಡಲಾಗುವುದು. ರಾಜ್ಯ ಸರಕಾರದಿಂದ ಬರಲಿರುವ 100 ವೆಂಟಿಲೇಟರ್ ಗಳನ್ನು ಸಮರ್ಪಕವಾಗಿ ಅಳವಡಿಸಿದರೆ ಇಡೀ ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚಿನ ಸಂಖ್ಯೆಯ ವೆಂಟಿಲೇಟರ್ ಹೊಂದಿರುವ ಜಿಲ್ಲೆಯಾಗಲಿದೆ ಎಂದು ಅವರು ಹೇಳಿದ್ದಾರೆ.