Wednesday, July 6, 2022

Latest Posts

ಡಾ.ವೈಎಎನ್‌ರಿಗೆ ಸಚಿವ ಸ್ಥಾನ ನೀಡಿ: ಹೈಕಮಾಂಡ್‌ಗೆ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸ ದಿಗಂತ ವರದಿ, ಕೋಲಾರ:

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಜಿಲ್ಲೆಗೊಬ್ಬ ಸಾರಥಿ ಅಗತ್ಯವಿದ್ದು, ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾಉಸ್ತುವಾರಿ ಸಚಿವರನ್ನಾಗಿಸಿ ಎಂದು ಬಿಜೆಪಿ ಹೈಕಮಾಂಡ್‌ಗೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಮಾಲೂರು,ಕೆಜಿಎಫ್,ಬಂಗಾರಪೇಟೆ ಮೂರುಕಡೆಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾದ ಇತಿಹಾಸವಿದೆ, ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ಸ್ಥಾನವೂ ಪಕ್ಷ ಗೆಲ್ಲಲು ಸಾಧ್ಯವಾಗಲಿಲ್ಲ.
ಬಿಜೆಪಿ ಜಿಲ್ಲೆಯಲ್ಲಿ ಭದ್ರಗೊಳ್ಳಬೇಕು ಎಂಬುದು ಕಾರ್ಯಕರ್ತರ ಆಶಯವಾಗಿದೆ, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಅನುವಾಗುವಂತೆ ಜಿಲ್ಲೆಗೆ ಸಚಿವ ಸ್ಥಾನ ನೀಡಿ, ಉಸ್ತುವಾರಿಯೂ ನೀಡಿದಲ್ಲಿ ಕಾರ್ಯಕರ್ತರು ಬೇರುಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಶಕ್ತಿ ತುಂಬಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಗೊಬ್ಬ ಉಸ್ತುವಾರಿ ಸಚಿವರನ್ನು ನೀಡದ್ದರ ಬಗ್ಗೆ ಜಿಲ್ಲೆಯ ಜನತೆಯಲ್ಲಿ ಬೇಸರವಿದೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ವರ್ಷಗಟ್ಟಲೇ ಉಸ್ತುವಾರಿ ಸಚಿವರೇ ಇರಲಿಲ್ಲ, ಕೋವಿಡ್ ಒತ್ತಡದ ನಂತರ ನೇಮಕಗೊಂಡ ಯೋಗಿಶ್ವರ್, ಎಂಟಿಬಿ.ನಾಗರಾಜ್ ಜಿಲ್ಲೆಗೆ ಬರಲು ಒಪ್ಪಲಿಲ್ಲ, ಕೊನೆಗೆ ಅರವಿಂದ ಲಿಂಬಾವಳಿ ಅವರನ್ನು ನೇಮಿಸಲಾಯಿತು ಎಂದು ತಿಳಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತಾಗಲು ಪ್ರಬಲ ನಾಯಕತ್ವದ ಅಗತ್ಯವಿದೆ, ಜಿಲ್ಲೆಯ ಶ್ರೀನಿವಾಸಪುರದವರು, ಇಂನಿನಿಯರಿಂಗ್ ಸ್ನಾತಕೋತ್ತರ ಪದವೀಧರರೂ ಆದ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷಕ್ಕೆ ಸದಾ ನಿಷ್ಟೆ ಹೊಂದಿರುವ  ಡಾ.ವೈ.ಎ.ನಾರಾಯಣಸ್ವಾಮಿ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗಿದ್ದು, ವಿದ್ಯಾವಂತರ ಪ್ರೀತಿಗೆ ಪಾತ್ರರಾಗಿದ್ದಾರೆ.
ಬೆಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ, ವಿಧಾನಪರಿಷತ್‌ನಲ್ಲಿ ಪಕ್ಷದ ಉಪನಾಯಕರಾಗಿ, ಸದನದ ಅರ್ಜಿ ಸಮಿತಿ,ಪರಿಶಿಷ್ಟರ,ಹಿಂದುಳಿದ ವರ್ಗಗಳ ಸಮಿತಿಯ ಸದಸ್ಯರಾಗಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಹೀಗೆ ಹಲವಾರು ಸಮಿತಿಗಳಲ್ಲಿ ಕೆಲಸ ಮಾಡಿರುವ ಅಪಾರ ಅನುಭವ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಇಂತಹ ಸಂಘಟನಾ ಚತುರರಾದ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕೋಲಾರ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳ ಭದ್ರಗೊಳ್ಳಲು ಅವಕಾಶ ನೀಡಿ ಎಂದು ಜಿಲ್ಲೆಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.
ನಗರಸಭಾ ಸದಸ್ಯ ಎಸ್.ಆರ್.ಮುರಳಿಗೌಡ, ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಎಸ್.ಬಿ.ಮುನಿವೆಂಕಟಪ್ಪ, ಜಿಲ್ಲಾ ಉಪಾಧ್ಯಕ್ಷೆ ಅರುಣಮ್ಮ, ಜಿಲ್ಲಾ ಕಾರ್ಯದರ್ಶಿ ಮುದ್ದಪ್ಪ ಮಂಜುನಾಥ್,ಜಿಲ್ಲಾ ಉಪಾಧ್ಯಕ್ಷ ಪಿ.ನಾರಾಯಣಸ್ವಾಮಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಮಮತಾ, ಕಾರ್ಯಾಲಯ ಕಾರ್ಯದರ್ಶಿ ರಾಜೇಶ್‌ಸಿಂಗ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಓಹಿಲೇಶ್,ಜಿಲ್ಲಾ ಮಾಧ್ಯಮ ಸಲಹೆಗಾರ ರವಿ, ಮಾಜಿ ತಾಲ್ಲೂಕು ಅಧ್ಯಕ್ಷ ಬೈಚಪ್ಪ ಮತ್ತಿತರರು ವೈಎಎನ್‌ರಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss