ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಮಂಡ್ಯ :
ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಬುದ್ಧಿ ಮಾಂದ್ಯ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಸೆಣಬ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗಿರೀಶ್ (21) ಎಂಬ ಬುದ್ಧಿಮಾಂದ್ಯ ಯುವಕನೇ ಮೃತಪಟ್ಟ ದುರ್ದೈವಿ. ಅದೇ ಗ್ರಾಮದ ರಾಮು ಎಂಬುವರಿಗೆ ಸೇರಿದ ಜಮೀನಿನಲ್ಲಿ ನರೇಗಾ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.