ಜೂನ್ 3 ರಂದು ತೆರವಾಗಲಿರುವ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ. ಮೇ 17ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್​, ಅಲ್ಲಂ ವೀರಭದ್ರಪ್ಪ, ಹೆಚ್​.ಎಂ.ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾರಾಯಣ ಸ್ವಾಮಿ ಕೆ.ವಿ, ಲಹರ್ ಸಿಂಗ್ ಸಿರೋಯಾ ಜೂನ್ 14ರಂದು ವಿಧಾನಪರಿಷತ್​ನಿಂದ ನಿವೃತ್ತಿಯಾಗಲಿದ್ದಾರೆ.
ಮೇ 25 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ 27 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!