Wednesday, June 29, 2022

Latest Posts

ಗುಜರಾತ್‌ ಗೆ ಸಾಗಾಟ ಮಾಡುತ್ತಿದ್ದ 2 ಕೋ.ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಆರೋಪಿಗಳು ಪರಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ನಗರದಿಂದ ಗುಜರಾತ್‌ನ ರಾಜ್‌ಕೋಟ್‌ಗೆ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಆರೋಪಿಗಳಾದ ಲಾರಿ ಚಾಲಕ ಬಾವೇಶ್ ಕೆ. ಷಾ, ಆಶೀಶ್ ಯಾದವ್, ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ ಜೋಷಿ ಪ್ರಕರಣದ ಆರೋಪಿಗಳು.
ಪ್ರಕರಣ ವಿವರ:
ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಭಟ್ಕಳ್ ಸೇರಿದಂತೆ ಇತರೆಡೆ ಅಡಿಕೆ ಹಾಗೂ ಇತರ ಕಾಡುತ್ಪತ್ತಿಗಳನ್ನು ಖರೀದಿಸಿ ಹೊರರಾಜ್ಯಕ್ಕೆ ಕಳುಹಿಸುತ್ತಿದೆ. ಅದರಂತೆ ಜು.19ರಂದು ಬೋಳೂರಿನ ಜಯಲಕ್ಷ್ಮಿ ಟ್ರಾನ್ಸ್‌ಪೋರ್ಟ್ ಬುಕಿಂಗ್ ಆಫೀಸ್‌ನಿಂದ ಒಂದು ಲಾರಿಯನ್ನು ಗೊತ್ತುಪಡಿಸಿ ಗುಜರಾತಿನ ರಾಜ್‌ಕೋಟ್‌ನಲ್ಲಿರುವ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಬ್ರಾಂಚ್ ಆಫೀಸಿಗೆ 291 ಚೀಲ ಅಡಕೆ ತುಂಬಿಸಿ ಕಳುಹಿಸಲಾಗಿತ್ತು. ಜು.20ರಂದು ಇನ್ನೊಂದು ಲಾರಿಯಲ್ಲಿ 301 ಚೀಲ ಅಡಕೆಯನ್ನು ಕೂಡಾ ಕಳುಹಿಸಲಾಗಿತ್ತು. ಈ ಎರಡು ಲಾರಿಗಳು ಜು.24ರಂದು ಗುಜರಾತ್ ರಾಜ್‌ಕೋಟ್ ಸಂಬಂಧಪಟ್ಟ ಬ್ರಾಂಚ್‌ಗೆ ತಲುಪಬೇಕಾಗಿತ್ತು. ಆದರೆ ಅಲ್ಲಿಗೆ ತಲುಪದೆ ಲಾರಿ ಸಹಿತ ಚಾಲಕರು ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಕೂಡಾ ಸ್ವಿಚ್ಡ್ ಆಫ್ ಆಗಿದೆ.
ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕರು ಮತ್ತು ಟ್ರಾನ್ಸ್‌ಪೋರ್ಟ್ ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss