ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಬಾಂಗ್ಲಾದೇಶ (IND vs BAN) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳು ಅಬ್ಬರಿಸುವ ಮೂಲಕ ಭರ್ಜರಿ ಜಯ ದಾಖಲಿಸಿದ್ದಾರೆ.
ಭಾರತ ನಿಗದಿತ 50 ಓವರ್ಗಳಲ್ಲಿ ಇಶಾನ್ ಕಿಶನ್ ಮತ್ತು ವಿರಾಟ್ ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ಮೂಲಕ 410 ರನ್ ಗಳ ಟಾರ್ಗೆಟ್ ನೀಡಿತು.
ಈ ಮೊತ್ತ ಬೆನ್ನಟ್ಟಿದ ಬಾಂಗ್ಲಾ ತಂಡವು ನಿಗದಿತ 34 ಓವರ್ ಗಳಲ್ಲಿ 182 ರನ್ ಗಳಿಸಿ, ಆಲ್ ಔಟ್ ಆಗುವ ಮೂಲಕ 227 ರನ್‌ಗಳಿಂದ ಸೋಲನ್ನಪ್ಪಿತು. ಈ ಮೂಲಕ ಸರಣಿ 2-1 ಅಂತರದಿಂದ ಬಾಂಗ್ಲಾ ಪಾಲಾಗಿದೆ. ಆದರೆ ಇಂದಿನ ಪಂದ್ಯದಲ್ಲಿ ಕಿಶನ್ ಅಬ್ಬರ ಎಲ್ಲ ಮೆಚ್ಚುಗೆಗೆ ಪಾತ್ರವಾಯಿತು.