ಏ.5 ರಂದು ಕೋಲಾರಕ್ಕೆ ರಾಹುಲ್ ಗಾಂಧಿ: ‘ಸತ್ಯಮೇವ ಜಯತೆ’ ಆಂದೋಲನಕ್ಕೆ ಚಾಲನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 5 ರಂದು ಕೋಲಾರಕ್ಕೆ ಆಗಮಿಸಲಿದ್ದಾರೆ.

ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರದಿಂದಲೇ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸತ್ಯಮೇವ ಜಯತೆ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎಮ್ ಆರ್ ಸೀತಾರಾಮ್ ಮಾಹಿತಿ ನೀಡಿದ್ದಾರೆ.

ಸಮಾವೇಶದಲ್ಲಿ ಸುಮಾರು ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೂಡ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!