ನಾಳೆ ಮಂಡ್ಯಕ್ಕೆ ಗೃಹ ಸಚಿವ ಶಾ ಆಗಮನ: ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಗೆ ಡಿ.30ರಂದು ಕೇಂದ್ರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಎಡಿಜಿಪಿ ಅಲೋಕ್‌ ಕುಮಾರ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಆಗಮಿಸಿ ಭದ್ರತೆ ಬಗ್ಗೆ ಪರಿಶೀಲನೆಯನ್ನು ನಡೆಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ, ನಿರ್ಗಮನದ ವೇಳೆ ಭದ್ರತಾ ಲೋಪವಾಗದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್​ ಕುಮಾರ್​​ ಸೂಚನೆ ನೀಡಿದರು. ಬಂದೋಬಸ್ತ್ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಗೋಪಾಲಯ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾ‌ರ್​ ಸುರಾನ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಚರ್ಚೆ ನಡೆಸಿದರು.

ಅಮಿತ್‌ ಶಾ ಅವರು ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲು ಅನುಕೂಲವಾಗುವಂತೆ ನಗರದ ಪಿಇಟಿ ಕ್ರೀಡಾಂಗಣದಲ್ಲಿ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಮೆಗಾಡೈರಿ ಸಮಾರಂಭದಲ್ಲಿ ಭಾಗಿ
ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮತ್ತೆ ಹುಲಿಗೆರೆಪುರ ಹೆಲಿಪ್ಯಾಡ್‌ಗೆ ತೆರಳಿ ಮಂಡ್ಯದ ಪಿಇಟಿ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯುವರು. ಅಲ್ಲಿಂದ ರಸ್ತೆ ಮಾರ್ಗವಾಗಿ ಮಂಡ್ಯ ವಿಶ್ವವಿದ್ಯಾನಿಲಯದ ಆವರಣಕ್ಕೆ ಬಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!