Saturday, July 2, 2022

Latest Posts

ಕೋವಿಡ್ ನಿರ್ವಹಣೆಗೆ ಬೇಕಾಗುವ ಸಲಕರಣೆ ಒದಗಿಸಲು ಕೈಗಾರಿಕಾ ಪ್ರತಿನಿಧಿಗಳಲ್ಲಿ ಜಿಲ್ಲಾಧಿಕಾರಿ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………

ಹೊಸ ದಿಗಂತ ವರದಿ, ಮೈಸೂರು:

ಕೋವಿಡ್ ನಿರ್ವಹಣೆಗೆ ಬೇಕಾಗುವ ವೈದ್ಯಕೀಯ ಮತ್ತು ತಾಂತ್ರಿಕ ಸಲಕರಣೆ ಒದಗಿಸಲು ಕೈಗಾರಿಕೆಗಳ ಸಿ.ಎಸ್.ಆರ್. ಯೋಜನೆಯಡಿ ನೆರವಾಗುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಕೈಗಾರಿಕಾ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಸಿ.ಎಸ್.ಆರ್.ನಲ್ಲಿ ಮಾಸ್ಕ್, ಸ್ಯಾನಿಟೈಸರ್‌ ಅನ್ನು ಕೊಟ್ಟಿದ್ದಾರೆ. ಈ ವರ್ಷ ಮಾಸ್ಕ್, ಸ್ಯಾನಿಟೈಸರ್‌ಗೆ ಬೇಡಿಕೆ ಇಲ್ಲ. ಈ ವರ್ಷ ವೈದ್ಯಕೀಯ ಮೂಲಸೌಕರ್ಯದ ಅಗತ್ಯವಿದೆ. ಆ ನಿಟ್ಟಿನಲ್ಲಿ ಕೈಗಾರಿಕೆಗಳು ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಿದರು.
ಮೈಸೂರಿನ ಮೂರು ಕಡೆ ಆರಂಭಿಸಲಾಗುತ್ತಿರುವ ‘ಕೋವಿಡ್ ಮಿತ್ರ’ ಟ್ರಯೇಜ್ (ಚಿಕಿತ್ಸಾ ಸರದಿ ನಿರ್ಧಾರ) ಮತ್ತು ಸಲಹಾ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿ ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ಮ.ಪಾ.ಆಯುಕ್ತ ಶಿಲ್ಪನಾಗ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಜಿಲ್ಲಾ ಸರ್ಜನ್ ಡಾ. ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss