ಹೊಸ ದಿಗಂತ ವರದಿ, ಮಡಿಕೇರಿ:
ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಲ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶಿಸಿದೆ.
ರಾಜ್ಯಪಾಲರ ಆದೇಶಾನುಸಾರ ಶನಿವಾರ ಈ ಸಂಬಂಧ ಆದೇಶ ಹೊರಡಿಸಿರುವ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅವರು, ರವಿ ಕುಶಾಲಪ್ಪ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸಚಿವರ
ಸ್ಥಾನಮಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.