ಸೋನಿಯಾಗೆ ಮತ್ತೆ ಬುಲಾವ್: ಜು.25 ಎರಡನೇ ಸುತ್ತಿನ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಸದ್ದು ಮಾಡಿರುವ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ಸುಮಾರು ಎರಡು ತಾಸುಗಳ ಕಾಲ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ಎದುರಿಸಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಜು.25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಬೇಕಿದೆ.
ಜು.26 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಆಕೆಯ ಒತ್ತಾಯದ ಮೇರೆಗೆ ಜು.25ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಇತ್ತೀಚೆಗಷ್ಟೇ ಕೋವಿಡ್‌ನಿಂದ ಚೇತರಿಸಿಕೊಂಡಿರುವ ಸೋನಿಯಾ ಗಾಂಧಿ ಅವರನ್ನು ಗುರುವಾರ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಬಳಿಕ ಆಕೆಯ ಮನವಿ ಮೇರೆಗೆ ವಿಚಾರಣೆ ಅಂತ್ಯಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!