ಹೊಸದಿಗಂತ ವರದಿ ಬಳ್ಳಾರಿ:
ಕರ್ನಾಟಕ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು, ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ, ಅರ್ಚನೆ ಸಲ್ಲಿಸಿದರು.
ಇಲ್ಲಿನ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಹಿನ್ನೆಲೆ ನಗರಕ್ಕೆ ಆಗಮಿಸಿದ ಅವರು, ದೇಗುಲಕ್ಕೆ ಭೇಟಿ ನೀಡಿ, ದೇವಿ ದರುಶನ ಪಡೆದು ಭಕ್ತಿ ಸಮರ್ಪಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಪ್ರದಾಯದಂತೆ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಸೇರಿದಂತೆ ವಿವಿಧ ಗಣ್ಯರು ಇತರರಿದ್ದರು. ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಕಲ್ಪಿಸಿದ್ದರು.



