Tuesday, March 21, 2023

Latest Posts

ಈಜಾಡಲು ಹೊಳೆಗೆ ಇಳಿದಿದ್ದ ಯುವಕರಿಬ್ಬರು ನೀರಲ್ಲಿ ಮುಳುಗಿ ದಾರುಣ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಯಸ್ವಿನಿ ಹೊಳೆಗೆ ಈಜಾಡಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ.

ಅಜ್ಜಾವರ ಗ್ರಾಮದ ದೊಡ್ಡೇರಿ ಎಂಬಲ್ಲಿಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯುವಕರು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಾಡಲೆಂದು ತೆರಳಿದ್ದರು. ಯುವಕರು ನದಿಗೆ ಇಳಿದು ಈಜಾಡುತ್ತಿದ್ದಾಗ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನದಿಯಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಇತರರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!