ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲು ಶಾಸಕ ಕೆ.ಜಿ.ಬೋಪಯ್ಯ ಸೂಚಿಸಿದ್ದಾರೆ.
ವೀರಾಜಪೇಟೆ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಸಭೆ ನಡೆಸಲಾಯಿತು. ಈ ವೇಳೆ ಕೋವಿಡ್ ಆಸ್ಪತ್ರೆಯಲ್ಲಿ ಅಗತ್ಯ ಹಾಸಿಗೆ ಹಾಗೂ ಆಮ್ಲಜನಕ ಇರಬೇಕು. ಜೊತೆಗೆ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಅಗತ್ಯ ಔಷಧಿ, ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಆರ್.ಯೋಗಾನಂದ, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಡಾ.ವಿಶ್ವನಾಥ ಸಿಂಪಿ, ಡಿವೈಎಸ್ಪಿ ಜಯಕುಮಾರ್, ತಾ.ಪಂ.ಇಒ ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವನಜಾಕ್ಷಿ ನೋಡಲ್ ಅಧಿಕಾರಿಗಳಾದ ಸಿ.ಶಿವಕುಮಾರ್, ಹೇಮಂತ್ ಕುಮಾರ್ ಮತ್ತಿತರರು ಇದ್ದರು.