spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೃಷಿ ಅಭಿಯಾನಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಚಾಲನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಹಾವೇರಿ: 

ರಾಜ್ಯಾದ್ಯಂತ ಕೃಷಿ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು, ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಯಿಂದ ರೈತರಿಗೆ ಸಿಗುವ ಸೌಲಭ್ಯಗಳ ಹಾಗೂ ಅನುಕೂಲಗಳ ಕುರಿತು ರೈತರಿಗೆ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.
ಸೋಮವಾರ ಹಾವೇರಿ ನಗರದಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಮೂರು ದಿನ ಕಾರ್ಯಕ್ರಮ ಆಯೋಜಿಸುವ ಮೂಲಕ ಪ್ರತಿ ಹಳ್ಳಿಗಳಲ್ಲಿ ರೈತರಿಗೆ ಇಲಾಖೆ ಕಾರ್ಯಕ್ರಮಗಳ ಮಾಹಿತಿ ನೀಡಲಾಗುವುದು. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ರೈತರು ನಿಗಧಿತ ಅವಧಿಯೊಳಗೆ ಬೆಳೆವಿಮೆ ಪಾವತಿಸಬೇಕು. ಕಳೆದ ವರ್ಷದಂತೆ ಈ ವರ್ಷ ಸಹ ಬೆಳೆವಿಮೆ ಸಮೀಕ್ಷೆ ಆರಂಭಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಕೈಗೊಂಡ 2.10 ಕೋಟಿ ಪ್ಲಾಟ್‌ಗಳ ಸಮೀಕ್ಷೆಯಲ್ಲಿ 46 ಲಕ್ಷ ಪ್ಲಾಟ್‌ಗಳ ಸಮೀಕ್ಷೆಯನ್ನು ಮೋಬೈಲ್ ಆಪ್ ಮೂಲಕ ಸ್ವತಃ ರೈತರು ಅಪ್‌ಲೋಡ್ ಮಾಡಿದ್ದರು. ಹಾಗಾಗಿ ಕಳೆದ ಸಾಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಅಪ್‌ಲೋಡ್ ಮಾಡುವ ಮೂಲಕ ಇದರ ಸದ್ವಿನಿಯೋಗಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಬಹುತೇಕ ಮುಂಗಾರು ಬಿತ್ತನೆ ಪೂರ್ಣಗೊಂಡಿದ್ದು, ಅಗತ್ಯ ಬೀಜ ಮತ್ತು ಗೊಬ್ಬರ ಪೂರೈಕೆಮಾಡಲಾಗಿದೆ ಹಾಗೂ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಈ ಭಾಗದಲ್ಲಿ ರೈತರು ಹೆಚ್ಚಾಗಿ ಮೆಕ್ಕೆಜೋಳ ಬಿತ್ತನೆ ಮಾಡುತ್ತಿದ್ದು, ಬೀದರ ಭಾಗದಲ್ಲಿ ಸೋಯಾ ಬೇಡಿಕೆ ಹೆಚ್ಚಾಗಿದೆ. ಕಳೆದ ವರ್ಷ 78 ಸಾವಿರ ಕ್ವಿಂಟಾಲ್ ಬೀಜವನ್ನು ವಿತರಣೆ ಮಾಡಲಾಗಿತ್ತು, ಪ್ರಸಕ್ತ 93,400 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, ಈ ವರ್ಷ 15 ಸಾವಿರ ಕ್ವಿಂಟಾಲ್ ಬೀಜಗಳನ್ನು ಹೆಚ್ಚಿಗೆ ವಿತರಣೆ ಮಾಡಲಾಗಿದೆ ಎಂದರು.
ರಾಷ್ಟ್ರೀಯ ಆಹಾರ ಮಿಷನ್ ಯೋಜನೆಯಡಿ ರಾಜ್ಯಾದ್ಯಂತ 12.60 ಕೋಟಿ ಮೊತ್ತದ ತೋಗರಿ, ಶೇಂಗಾ ಹಾಗೂ ಸೋಯಾ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗಿದೆ. ರೈತರು ಬಹುಬೆಳೆ ಬೆಳೆದು ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮವಾಗಿದೆ. ಇದೇ ಸಂದರ್ಭ  ಕೃಷಿ ಇಲಾಖೆಯ ಮಾಹಿತಿಯ ಪ್ರಚಾರ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿ.ಪಂ ಸಿಇಒ ಮಹಮ್ಮದ ರೋಷನ್, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ, ಉಪ ಕೃಷಿ ನಿರ್ದೇಶಕರಾದ ಯಲ್ಲಪ್ಪ ಕೊರವರ ಹಾಗೂ ಸ್ಪೂರ್ತಿ ಇದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss