ಹೊಸ ದಿಗಂತ ವರದಿ, ಹಾಸನ:
ಸ್ಥಳೀಯ ಶಾಸಕ ಪ್ರೀತಂ ಜೆ.ಗೌಡ ಅವರ ಮನವಿಗೆ ಸ್ಪಂದಿಸಿ ಜಿಲ್ಲೆಗೆ 3700 ಕೋವ್ಯಾಕ್ಸಿನ್ ಲಸಿಕೆಯನ್ನು ರಾಜ್ಯ ಸರ್ಕಾರ ಬುಧವಾರ ಪೂರೈಕೆ ಮಾಡಿದೆ.
ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಕೊರತೆ ಇರುವ ಬಗ್ಗೆ ಪ್ರೀತಂ ಗೌಡ ಮಂಗಳವಾರವಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದರು. ಇದಕ್ಕೆ ತುರ್ತಾಗಿ ಸ್ಪಂದಿಸಿರುವ ಸಿಎಂ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ 3700 ಲಸಿಕೆಯನ್ನು ಜಿಲ್ಲೆಗೆ ಒದಗಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆ ಹಾಕಿಸಿಕೊಂಡು 2ನೇ ಹಂತದ ಡೋಸ್ ಪಡೆಯಲು ಕಾಯುತ್ತಿರುವ ಅರ್ಹರು ಜನರು, ಬುಧವಾರದಿಂದಲೇ ಸಂಬಂಧಪಟ್ಟ ಲಸಿಕಾ ಕೇಂದ್ರಕ್ಕೆ ತೆರಳಿ ಅಂತಿಮ ಡೋಸ್ ಲಸಿಕೆ ಪಡೆಯಬಹುದಾಗಿದೆ. ಇದೇ ವೇಳೆ ತಮ್ಮ ಮನವಿಗೆ ತುರ್ತಾಸಿ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಪ್ರೀತಂ ಗೌಡ ಧನ್ಯವಾದ ಹೇಳಿದ್ದಾರೆ.
ಕೊರೊನಾ ಮಹಾಮಾರಿ ವಿರುದ್ಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ ಸಾರಿದ್ದು, ಹಂತ ಹಂತವಾಗಿ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಇತ್ಯಾದಿ ಸೌಲಭ್ಯ ಸರ್ಕಾರಗಳಿಂದ ಸಿಗಲಿದೆ ಎಂದೂ ಶಾಸಕರು ತಇಳಿಸಿದ್ದಾರೆ.