ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಮಡಿಕೇರಿ:
ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ನವಗ್ರಾಮದಲ್ಲಿ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ನಡೆದಿದೆ.
ನವಗ್ರಾಮದ ಧರ್ಮಾವತಿ ಮುತ್ತಣ್ಣ ಅವರ ಮನೆಯ ಹಿಂಭಾಗದ ಗೋಡೆ ಮಳೆ ನೀರು ಬಿದ್ದು ನೆಲಕ್ಕುರುಳಿದೆ.
ನಿರಂತರ ಮಳೆಯಿಂದ ಬೇರೆ ಗೋಡೆಗಳು ಕೂಡಾ ಬೀಳುವ ಸ್ಥಿತಿಯಲ್ಲಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಧರ್ಮಾವತಿ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಷಂಶುದ್ಧೀನ್ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮತ್ತು ಕುಶಾಲನಗರ ಕಂದಾಯ ಪರಿವೀಕ್ಷಕರಿಗೆ ಮಾಹಿತಿ ನೀಡುವುದರೊಂದಿಗೆ, ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು. ನಂತರ ಸ್ಥಳಕ್ಕಾಗಮಿಸಿದ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಗುರುದರ್ಶನ್, ಪರಿಶೀಲನೆ ನಡೆಸಿದರು.
ಈ ಸಂದರ್ಭ ಕಂದಾಯ ಇಲಾಖೆಯ ಸಿಬ್ಬಂದಿ ಲೋಕೇಶ್ ಹಾಗೂ ಗ್ರಾಮಸ್ಥರು ಇದ್ದರು.