ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………….
ಹೊಸ ದಿಗಂತ ವರದಿ, ಮಂಗಳೂರು:
ಕಾರಿನಲ್ಲಿ ತ್ಯಾಜ್ಯ ತಂದು ನೇತ್ರಾವತಿ ನದಿಗೆ ಎಸೆದ ಮಹಿಳೆಯರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಮಹಿಳೆಯರಿಬ್ಬರು ಕಾರಿನಲ್ಲಿ ಬಂದು ಉಳ್ಳಾಲ ಸೇತುವೆಯಲ್ಲಿ ಕಾರು ನಿಲ್ಲಿಸಿ ನದಿಗೆ ತ್ಯಾಜ್ಯ ಎಸೆಯುವ ವೀಡಿಯೋ ಶನಿವಾರ ವೈರಲ್ ಆಗುತ್ತಿದ್ದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಜೆಯ ಒಳಗೆ ಕಾರನ್ನು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ.
ಕಸ ಎಸೆದ ಮಹಿಳೆ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರು ನಿವಾಸಿಯಾಗಿದ್ದಾರೆ. ನೇತ್ರಾವತಿ ನದಿಗೆ ತ್ಯಾಜ್ಯವನ್ನು ಎಸೆದ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.