ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ