Monday, August 8, 2022

Latest Posts

ಮಳೆಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಅಲ್ಲಂಪ್ರಭು ಪಾಟೀಲ್ ಭೇಟಿ, ಪರಿಶೀಲನೆ

ಹೊಸ ದಿಗಂತ ವರದಿ, ಕಲಬುರಗಿ:

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ್ ಅವರು ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ಅನೇಕ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದರು.
ಮಳೆಯಿಂದ ಹಾನಿಗೊಳಗಾದ ಭೀಮಳ್ಳಿ, ಭೋಸಗಾ, ಸಾವಳಗಿ, ಪಟ್ಟಣ, ಮೇಳಕುಂದಾ, ಕಣ್ಣಿ, ಹಡಗಿಲ ಸೇರಿದಂತೆ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ.
ಅದರಂತೆ ನೀರಿನ ಪೈಪುಗಳು ಹಾಳಾಗಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ಒದಗಿಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭ   ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸಂತೋಷ ಪಾಟೀಲ ಧನ್ನೂರ, ಮಾಜಿ ಗ್ರಾಮಪಂಚಾಯತಿ ಅಧ್ಯಕ್ಷರಾದ ನೀಲಕಂಠ ರಾವ್‍ಸಾವಳಗಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಈರಣ್ಣ ಡಬ್ಬಿ ಅವರು, ಗ್ರಾಮ ಪಂಚಾಯಿತಿ ಸದಸ್ಯರಾದ ಸಿಂಗೆ, ಕಾಂಗ್ರೆಸ್‍ಮುಖಂಡರಾದ ಇಸ್ಮಾಯಿಲ್, ಸಂಜು ಬಿರಾದಾರ, ಬೀರಪ್ಪ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss