Tuesday, July 5, 2022

Latest Posts

ಯಾರ್ಯಾರದ್ದೋ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಹಾವೇರಿ:

ಯಾರ್ಯಾರೋ ಹೇಳಿಕೆ ನೀಡಿದ್ದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ
ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಗಂಡಸರಿಗೂ ರಕ್ಷಣೆ ಇಲ್ಲ ಎಂಬ ಡಿ.ಕೆ.ಶಿವಕುಮಾರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರೀಯಿಸಿದರು.
ಜಿಲ್ಲೆಯ ಹಿರೇಕೇರೂರಿನ ಬಸರೀಹಳ್ಳಿ ಗ್ರಾಮದಲ್ಲಿನ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಮೈಸೂರಿನ ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡುವುದಕ್ಕೆ ನಮ್ಮ ಪೊಲೀಸರು ದಕ್ಷರಿದ್ದಾರೆ, ಪ್ರಕರಣ ಭೇದಿಸುತ್ತಾರೆ, ತಪ್ಪಿತಸ್ಥರಿಗೆ ಶಿಕ್ಷೆಗೆ ಒಳಪಡಿಸುತ್ತಾರೆ ಎಂದರು.
ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳ ಒತ್ತಾಯವಿದೆ. ಗಣೇಶೋತ್ಸವ ಆಚರಣೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳೇನೂ ಇಲ್ಲ, ಎಲ್ಲರೂ ಅವರವರ ಅಭಿಪ್ರಾಯ ಹೇಳಿದ್ದಾರೆ, ಇದೇ ದಿ.30 ರಂದು ತಜ್ಞರ ಸಭೆ ಕರೆಯಲಾಗಿದೆ ಸಭೆಯಲ್ಲಿ ಚರ್ಚಿಸಿ ಗಣೇಶೋತ್ಸವ ಆಚರಣೆ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss