ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಈವರೆಗೆ ಸುಮಾರು ಈವರೆಗೆ 25 ಕೋಟಿಗೂ ಅಧಿಕ ಡೋಸ್ ಲಸಿಕೆಗಳನ್ನು ಕೇಂದ್ರವು ಉಚಿತವಾಗಿ ನೀಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ವ್ಯರ್ಥವಾಗಿರುವ ಡೋಸ್ಗಳನ್ನೂ ಲೆಕ್ಕ ಹಾಕಿದರೆ ಈವರೆಗೆ 24 ಕೋಟಿಗೂ ಅಧಿಕ ಡೋಸ್ ಲಸಿಕೆಗಳು ಬಳಕೆಯಾಗಿವೆ. 38 ಲಕ್ಷ ಲಸಿಕೆ ಡೋಸ್ಗಳಿಗೆ ಆರ್ಡರ್ ನೀಡಲಾಗಿದೆ. ಮುಂದಿನ ಮೂರು ದಿನಗಳ ಒಳಗೆ ರಾಜ್ಯಗಳು ಈ ಲಸಿಕೆಗಳನ್ನು ಸ್ವೀಕರಿಸಲಿವೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಲಸಿಕೆ ನೀಡಿಕೆಗಾಗಿ ಇನ್ನು1.17 ಕೋಟಿ ಹೆಚ್ಚು ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ ಎಂದು ಸಚಿವಾಲಯ ಹೇಳಿದೆ.