ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮೈಸೂರು:
ವಿದ್ಯಾರ್ಥಿನಿಯೊಬ್ಬರ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರಿನ ಆರ್.ಎಸ್. ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿರುವ ಸ್ಟಡಿ ಹೌಸ್ನಲ್ಲಿ ಆಂಧ್ರ ಪ್ರದೇಶ ಮೂಲದ 7 ಮಂದಿ ಇದ್ದರು.
ವಿದ್ಯಾರ್ಥಿಗಳು ತರಗತಿ, ಸೆಮಿನಾರ್ ಗೆ ತೆರಳಿದ್ದರು. ಈ ವೇಳೆಯನ್ನೇ ಗಮನಿಸಿ, ನೀರು ಕೇಳುವ ನೆಪದಲ್ಲಿ ಹೋಲಿ ಕ್ರಾಸ್ ಸ್ಟಡಿ ಹೌಸ್ ನುಗ್ಗಿರುವ ಕಿರಾತಕ ಒಂಟಿಯಾಗಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ
ಡಿಸಿಪಿ ಪ್ರದೀಪ್ ಗುಂಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸಮೀಪದ ಸಿಟಿಟಿವಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಶೋಧ ಕಾರ್ಯ ನಡೆಯುತ್ತಿದೆ.