ದುಬೈಗೆ ಪ್ರಯಾಣಿಸಲು ನಟಿ ಜಾಕ್ವೆಲಿನ್​ಗೆ ಅನುಮತಿ ನೀಡಿದ ದೆಹಲಿ ನ್ಯಾಯಾಲಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೆಲಸದ ನಿಮಿತ್ತ ನಟಿ ಜಾಕ್ವೆಲಿನ್​ ಫೆರ್ನಾಂಡಿಸ್ ದುಬೈಗೆ ಪ್ರಯಾಣಿಸಲು ಕೋರ್ಟ್ ಅನುಮತಿ ನೀಡಿದೆ.
200 ಕೋ. ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ಸುಕೇಶ್‌ ಚಂದ್ರಶೇಖರ್‌ ತಿಹಾರ್​ ಜೈಲು ಪಾಲಾಗಿದ್ದು, ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಗೆ ದುಬೈ ಪ್ರವಾಸಕ್ಕೆ ಅನುಮತಿ ಕೋರಿದ್ದು, ದೆಹಲಿ ನ್ಯಾಯಾಲಯ ಇಂದು ಅನುಮತಿ ನೀಡಿದೆ.

ಈವೆಂಟ್​ ಒಂದರ ಸಲುವಾಗಿ ಜನವರಿ 27 ರಿಂದ 30ರವರೆಗೆ ದುಬೈಗೆ ಪ್ರಯಾಣಿಸಲು ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಕೆಲ ದಿನಗಳ ಹಿಂದೆ ನ್ಯಾಯಾಲಯಕ್ಕೆ ಅನುಮತಿ ಕೋರಿದ್ದರು.

ಪಟಿಯಾಲಾ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಶುಕ್ರವಾರ ನಟಿ ಜಾಕ್ವೆಲಿನ್​ಗೆ ರಿಲೀಫ್​ ನೀಡಿದ್ದು, ಅವರಿಗೆ ವೃತ್ತಿಪರ ಜೀವನವಿದೆ ಮತ್ತು ವೈಯಕ್ತಿಕ ಸ್ವಾತಂತ್ರ್ಯ ಮೊಟಕುಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!