ಇಂದು ರಾಷ್ಟ್ರಪತಿ ಭವನದಲ್ಲಿ 106 ಸಾಧಕರಿಗೆ ಪದ್ಮಶ್ರೀ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ನೇ ಸಾಲಿನ ಪದ್ಮಶ್ರೀ ಪುರಸ್ಕೃತರಿಗೆ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮಾಜಿ ಸಿಎಂ ಎಸ್.ಎಂ ಕೃಷ್ಣ, ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇನ್ಫೋಸಿಸ್ ಸುಧಾಮೂರ್ತಿ ಅವರುಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿವಿಧ ವಿಭಾಗ ಹಾಗೂ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸ ಮಾಡಿದ ಒಟ್ಟು 106 ಮಹನೀಯರನ್ನು ಇಂದು ಗೌರವಿಸಲಾಗುತ್ತದೆ.

ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!