ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 958ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಇಂದು ಕೋವಿಡ್ ನಿಂದ 154 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 3,208 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.52ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.