Friday, June 2, 2023

Latest Posts

ರಾಜ್ಯದಲ್ಲಿ ಇಂದು 11,698 ಜನರಿಗೆ ಕೊರೋನಾ ಪಾಸಿಟಿವ್, ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ 11,698 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಅಲ್ಲದೇ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ ರಾಜ್ಯದಲ್ಲಿ 11,698 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.
ಪಾಸಿಟಿವಿಟಿ ದರ ಶೇ.7.77ಕ್ಕೆ ಏರಿಕೆಯಾಗಿದೆ. ಇಂದು 1,148 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯಾದ್ಯಂತ 60,148 ಸಕ್ರೀಯ ಸೋಂಕಿತರಿದ್ದಾರೆ. ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!