ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 25,005 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 8 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 2,01,704 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ 18,374 ಸೇರಿದಂತೆ ರಾಜ್ಯದಲ್ಲಿ 25,005 ಮಂದಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
2,363 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. ಪಾಸಿಟಿವಿಟಿ ದರ ಶೇ.12.39ಕ್ಕೆ ಏರಿಕೆಯಾಗಿರೋದಾಗಿ ಹೇಳಿದ್ದಾರೆ.