Thursday, August 11, 2022

Latest Posts

ರಾಜ್ಯದಲ್ಲಿ ಇಂದು 2,743 ಮಂದಿಗೆ ಕೊರೋನಾ ಪಾಸಿಟಿವ್, ಪಾಸಿಟಿವಿಟಿ ದರ ಶೇ. 1.64ಕ್ಕೆ ಇಳಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 2,743 ಕೊರೋನಾ ಪಾಸಿಟಿವ್ ಪ್ರಕಟವಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 75 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,601ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ರಾಜ್ಯದಲ್ಲಿ ಇಂದು 3,081 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,87,111ಕ್ಕೆ ಏರಿಕೆಯಾಗಿದೆ. ಇನ್ನು 39,603 ಸಕ್ರೀಯ ಪ್ರಕರಣಗಳಿವೆ.
ಇಂದು 1,66,631 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,743 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.64ಕ್ಕೆ ಇಳಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss