ರಾಜ್ಯದಲ್ಲಿ ಇಂದು279 ಜನರಿಗೆ ಕೊರೋನಾ ಸೋಂಕು, ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು279 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಒಬ್ಬರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 6359 ಜನರ ಕೋವಿಡ್ ಪರೀಕ್ಷೆ ಮಾಡಲಾಗಿದೆ. 279 ಜನರಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿಂದು 235 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 1222 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.38ರಷ್ಟು ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!