ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 6 ಜನರು ಕೊರೋನಾಗೆ ಬಲಿಯಾಗಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,699ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 260 ಸೇರಿದಂತೆ ಇದುವರೆಗೆ 29,53,327 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 7,100 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.