Thursday, July 7, 2022

Latest Posts

ರಾಜ್ಯದಲ್ಲಿ ಇಂದು 40,990 ಜನರಿಗೆ ಕೊರೋನಾ ಪಾಸಿಟಿವ್, 271 ಜನರು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 40,990 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1564132 ಕ್ಕೆ ಏರಿಕೆಯಾಗಿದೆ. ಇಂದು 271 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಇಂದು 18341 ಸೋಂಕಿತರು ಸೇರಿದಂತೆ ಇದುವರೆಗೆ 11,43,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ 405068 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss