Friday, August 19, 2022

Latest Posts

ರಾಜ್ಯದಲ್ಲಿ ಇಂದು 528 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 413 ಸೋಂಕಿತರು ಗುಣಮುಖ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 528 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,52,565ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,346ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 413 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,34,143ಕ್ಕೆ ಏರಿಕೆಯಾಗಿದೆ. ಇನ್ನು 5824 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 116 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!