ರಾಜ್ಯದಲ್ಲಿ ಇಂದು 74 ಮಂದಿಗೆ ಕೋವಿಡ್: ಸೋಂಕಿಗೆ ಇಬ್ಬರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯದಲ್ಲಿ ಇಂದು 74 ಮಂದಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಅದರಲ್ಲಿ ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 4680, RAT ಪರೀಕ್ಷೆ ಮೂಲಕ 1723 ಮಂದಿ ಸೇರಿದಂತೆ 6403 ಜನರನ್ನು ಕೋವಿಡ್ ಪರೀಕ್ಷೆಗೆ ( Covid19 Test ) ಒಳಪಡಿಸಲಾಯಿತು. ಇವರಲ್ಲಿ 74 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರಲ್ಲಿ 57, ಬೆಂಗಳೂರು ಗ್ರಾಮಾತಂರ 4, ಚಿಕ್ಕಬಳ್ಳಾಪುರ 3, ಹಾಸನ 4, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು, ವಿಜಯನಗರ ಹಾಗೂ ಚಾಮರಾಜನಗರದಲ್ಲಿ ತಲಾ ಒಬ್ಬರು ಸೇರಿದಂತೆ 74 ಮಂದಿಗೆ ಕೊರೋನಾ ( Corona ) ದೃಢಪಟ್ಟಿದೆ.

ಇನ್ನೂ ಕೋವಿಡ್ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು, ಮೈಸೂರಲ್ಲಿ ಒಬ್ಬರು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!