ರಾಜ್ಯದಲ್ಲಿ ಇಂದು 8,425 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ ಶೇ.6.5ಕ್ಕೆ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಇಂದು 8,425 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದಾಗಿ ಇಂದು 47 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 3,822 ಸೇರಿದಂತೆ ರಾಜ್ಯದಲ್ಲಿ 8,425 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಪಾಸಿಟಿವಿಟಿ ದರ ಶೇ.6.5ಕ್ಕೆ ಇಳಿಕೆ ಕಂಡಿದೆ. ಇನ್ನು ಇಂದು 19,800 ಮಂದಿ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನು ರಾಜ್ಯದಲ್ಲಿ 97,781 ಸಕ್ರೀಯ ಪ್ರಕರಣಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!