ರಾಜ್ಯದಲ್ಲಿ ಇಂದು 87 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 38 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 87 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 7,589 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.14ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!