ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಂಗಳೂರು ಸೇರಿದಂತೆ ಪ್ರಾದೇಶಿಕ ಕೇಂದ್ರಗಳಲ್ಲಿ ಬಿಜೆಪಿ ನಂದಿನಿ ಹಾಲಿನ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಿದೆ.

ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿರುವ ಡಿಸಿ ಕಚೇರಿ ಎದುರು ಈ ಪ್ರತಿಭಟನೆ ನಡೆಯಲಿದೆ. ಹಸು ಕಟ್ಟಿ ಹಾಲು ಕರೆದು ಜಿಲ್ಲಾಧಿಕಾರಿಗಳಿಗೆ ನೀಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ.

ಕಾಂಗ್ರೆಸ್ ಸರಕಾರದಲ್ಲಿ ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಸರಕಾರ ಕೂಡಲೇ ಹಾಲಿನ ದರ ಇಳಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!