ಇಂದು ಬಳ್ಳಾರಿಯಲ್ಲಿ ಸಿಎಂ ಫುಲ್ ಬ್ಯುಸಿ.. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬಳ್ಳಾರಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಟೇಕಾಫ್ ಆಗಲಿದ್ದು, 10:50ಕ್ಕೆ ತೋರಣಗಲ್ಲಿನ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳು ಬೆಳಗ್ಗೆ 11:15ಕ್ಕೆ ಸಂಡೂರಿಗೆ ಆಗಮಿಸಲಿದ್ದು, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ವಿಶ್ವಾಸ್ ಯು.ಲಾಡ್ನಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಹೇಳಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!