ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,841 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಸತತ ನಾಲ್ಕನೇ ದಿನಕ್ಕೆ 3000ಕ್ಕಿಂತ ಕಡಿಮೆಯಾಗಿದೆ. ಒಟ್ಟು ಪಾಸಿಟಿವಿಟಿ ದರ ಶೇಕಡಾ 0.04 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 3,295 ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಒಟ್ಟು ಚೇತರಿಕೆ ಕಂಡ ರೋಗಿಗಳ ಸಂಖ್ಯೆ 4,25,73,460 ಕ್ಕೆ ತಲುಪಿದೆ. ರಾಷ್ಟ್ರೀಯ COVID-19 ಚೇತರಿಕೆ ದರವು 98.74 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 4,86,628 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ.