ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ನಟ ಸಾರ್ವಭೌಮ , ಕನ್ನಡ ಕಣ್ಮಣಿ ಡಾ. ರಾಜ್ ಕುಮಾರ್ ಅವರ 15ನೇ ಪುಣ್ಯತಿಥಿ. ಈ ಹಿನ್ನೆಲೆ ಕುಟುಂಬಸ್ಥರೆಲ್ಲರೂ ರಾಜ್ ಕುಮಾರ್ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ನಟ ರಾಘವೇಂದ್ರ ರಾಜ್ ಕುಮಾರ್, ಪತ್ನಿ ಮಂಗಳ, ನಟ ಶಿವರಾಜ್ ಕುಮಾರ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಕಂಠೀರವ ಸ್ಟೂಡಿಯೋದಲ್ಲಿರುವ ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಬಳಿ ತೆರಳಿ, ಪೂಜೆ ಸಲ್ಲಿಸಿದ್ದಾರೆ.
ರಾಜ್ ಕುಮಾರ್ ಅವರ ಪುಣ್ಯತಿಥಿ ನಿಮಿತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಅಪ್ರತಿಮ ಕಲಾವಿದ, ಕನ್ನಡ ಚಿತ್ರರಂಗದ ಮೇರುನಟ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಪದ್ಮಭೂಷಣ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ ’ಅಣ್ಣಾವ್ರು’, ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದಿದ್ದಾರೆ