ಇಂದು ಗದಗ, ದಾವಣಗೆರೆಯಲ್ಲಿ ‘ಕೈ’ ಅಭ್ಯರ್ಥಿಗಳ ಪರ ಪ್ರಿಯಾಂಕಾ ಭರ್ಜರಿ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಗದಗ, ದಾವಣಗೆರೆಯಲ್ಲಿ ಪ್ರಚಾರ ನಡೆಸಲಿದ್ದಾರೆ.

ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇಂದು ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ.

ಇಂದು ಗದಗ ನಗರದಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ ಸ್ವಾಮಿ ಗಡ್ಡದೇವರ ಮಠ ಪರವಾಗಿ ಪ್ರಚಾರ ನಡೆಸಿ ಮತ ಕೇಳಲಿದ್ದಾರೆ. ಈ ಸಮಾವೇಶ ಗದಗ ವಿಶ್ವವಿದ್ಯಾಲಯ ನಗರದಲ್ಲಿ ಸಂಜೆ 5:00 ಗಂಟೆಗೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!